ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ನಡೆದ ರೈತರ ಬೃಹತ್ ಹೋರಾಟದ ವೇಳೆ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ವಾಹನ ಸವಾರರು ಬಂದಾಗ ಆಕ್ರೋಶಗೊಂಡ ಹೋರಾಟಗಾರರು ಕಲ್ಲು ಹಿಡಿದು ವಾಹನಗಳನ್ನು ತಡೆದರು. ಇಲ್ಲಿ ಬರಬೇಡಿ ಎಂದು ವಾಹನ ಸವಾರರಿಗೆ ಎಚ್ಚರಿಕೆ ನೀಡಿದರು.
ಸ್ಥಳದಲ್ಲಿ ಬಂದೋಬಸ್ತ್ ಗೆ ನಿಯೋಜನೆಗೊಂಡಿದ್ದ ಪೊಲೀಸರ ವಿರುದ್ಧವೂ ರೈತರು ಆಕ್ರೋಶ ವ್ಯಕ್ತಪಡಿಸಿದರು. ಬೇಡಿಕೆ ಈಡೇರುವವರೆಗೂ ರಸ್ತೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಫ್ಲೈಓವರ್ ಕೆಳಗೆ ಸಾವಿರಾರು ರೈತರು ಹಸಿರು ಶಾಲು ಧರಿಸಿ ಕುಳಿತಿದ್ದರಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ರಸ್ತೆ ಬಹಳ ಹೊತ್ತು ಬಂದ್ ಆಗಿತ್ತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಟ್ಟರು.