ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆಯಿಂದ ವಾಣಿಜ್ಯ ನಗರಿ ಹುಬ್ಬಳ್ಳಿ ಅಕ್ಷರಶಃ ಸ್ತಬ್ಧಗೊಂಡಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 15 ಸಾವಿರಕ್ಕೂ ಅಧಿಕ ರೈತರು ಶಶಿಕಾಂತ ಗುರೂಜಿ ನೇತ್ರತ್ವದಲ್ಲಿ ಚೆನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.