Home / ಹುಬ್ಬಳ್ಳಿ-ಧಾರವಾಡ / ಗಣೇಶ ಹಬ್ಬದ ಹಿನ್ನೆಲೆ ಧಾರವಾಡ ಜಿಲ್ಲಾ ವ್ಯಾಪ್...

ಗಣೇಶ ಹಬ್ಬದ ಹಿನ್ನೆಲೆ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಡಿಜೆ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ಬ್ಯಾನ್

E
By ETV 24X7 Chief Admin
September 10, 2026 1 views 0 comments Edit Article

ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಡಿಜೆ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ವಾಹನಗಳು ...

ಗಣೇಶ ಹಬ್ಬದ ಹಿನ್ನೆಲೆ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಡಿಜೆ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ಬ್ಯಾನ್
ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಡಿಜೆ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ ೭೫ ಡೆಸಿಬಲ್ ಶಬ್ದವೃದ್ಧಿ ಸಾಧನಗಳ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಆದೇಶ ಹೊರಡಿಸಿದ್ದಾರೆ.
ವಸತಿ ಪ್ರದೇಶಗಳು, ಸೈಲೆಂಟ್ ಝೋನ್‌ಗಳು, ಸಂಚಾರ ದಟ್ಟಣೆ ಪ್ರದೇಶಗಳು, ಸಮುದಾಯ ಸೂಕ್ಷö್ಮ ಪ್ರದೇಶಗಳು ಹಾಗೂ ಇಡೀ ಜಿಲ್ಲೆಯಾದ್ಯಂತ ರಾತ್ರಿ ೧೦ ಗಂಟೆಯಿAದ ಬೆಳಗ್ಗೆ ೬ ಗಂಟೆವರೆಗೆ ಡಿಜೆ ಹಾಗೂ ಹೆಚ್ಚಿನ ಶಬ್ದ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದೇಶದ ಉಪ್ಪಂಘನೆ ಕಂಡು ಬಂದಲ್ಲಿ ಸಂಬAಧಿತ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಮೆರವಣಿಗೆ ಹಾಗೂ ಕಾರ್ಯಕ್ರಮವನ್ನು ತಕ್ಷಣ ನಿಲ್ಲಿಸುವಂತೆ ಹಾಗೂ ಡಿಜೆ ಉಪಕರಣಗಳನ್ನು ಜಪ್ತಿ ಮಾಡುವಂತೆ ಸೂಚಿಸಲಾಗಿದೆ. ಅಗತ್ಯಬಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು. ಗುಂಪನ್ನು ಚದುರಿಸಬೇಕು. ಸಂಬಂಧಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಅನುಮತಿಗಳನ್ನು ರದ್ದುಪಡಿಸುವ ಅಧಿಕಾರ ನೀಡಲಾಗಿದೆ.
ಸಾರ್ವಜನಿಕ ಕಾರ್ಯಕ್ರಮ ಹಾಗೂ ಮೆರವಣಿಗೆ ಆಚರಣೆಯನ್ನು ಆಯೋಜಿಸುವರು ಅತೀ ಅವಶ್ಯಕವಿದ್ದಲ್ಲಿ ಪೂರ್ವ ಲಿಖಿತ ಷರತ್ತುಬದ್ಧ ಮಿತ ಶಬ್ದ ವ್ಯವಸ್ಥೆಗಳಿಗೆ ಮಾತ್ರ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಶಬ್ದ ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಲಿಖಿತ ಮುಚ್ಚಳಿಕೆ ಪತ್ರ ನೀಡಬೇಕು. ಹಾಗೂ ಆದೇಶದ ಉಲ್ಲಂಘನೆ ಸಂಭವಿಸಿದಲ್ಲಿ ಆಯೋಜಕರು ವೈಯಕ್ತಿಕವಾಗಿ ಹೊಣೆಗಾರರಾಗಬೇಕಾಗುತ್ತದೆ. ಈ ಆದೇಶವನ್ನು ಪೊಲೀಸ್ ಆಯುಕ್ತರು ಹಾಗೂ ಧಾರವಾಡ ಜಿಲ್ಲಾ ಪೊಲೀಸ್ ಅಧಿಕ್ಷಕರು ತಕ್ಷಣದಿಂದ ಜಾರಿಗೆ ತರಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಸೂಚನೆ ನೀಡಿದ್ದಾರೆ.
TAGS: ETV 24X7 Breaking
SHARE THIS ARTICLE
E

ETV 24X7 Chief Admin

Senior Staff Journalist and Correspondent at ETV 24X7. Covering breaking global stories, contemporary culture, and modern innovations.

ETV 24X7 Live Search

Search Articles

Type any keyword to instantly search stories across categories.